ವಿರಾಟ್ ಕೊಹ್ಲಿಗೆ ಕೊಕ್..? ಹಾಗಾದ್ರೆ ಮುಂದಿನ ನಾಯಕನ ಪಟ್ಟ ಯಾರಿಗೆ..?

ಮೊನ್ನೆ ಮೊನ್ನೆಯಷ್ಟೆ ಐಸಿಸಿ ಏಕದಿನ ವಿಶ್ವಕಪ್ ಅನ್ನು ಇಂಗ್ಲೆಂಡ್ ಗೆದ್ದು ಬೀಗುತ್ತಿದೆ.. ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ವಜಾಗೊಳಿಸಿ ರೋಹಿತ್ ಶರ್ಮಾ ಗೆ ನಾಯಕನ ಸ್ಥಾನ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.. ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ..
ಮುಂದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ರೋಹಿತ್ ಶರ್ಮಾ ಅವರಿಗೆ ಸೀಮಿತ ಓವರುಗಳ ಕ್ರಿಕೆಟ್ ತಂಡದ ನಾಯಕನ ಪಟ್ಟ ನೀಡಲಾಗುವುದು ಎಂದು ಹೇಳಲಾಗುತ್ತಿದೆ.. ವಿರಾಟ್ ಕೊಹ್ಲಿ ಅವರು ಟೆಸ್ಟ್ ತಂಡದ ನಾಯಕನ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವಕಪ್ ಸೆಮಿಫೈನಲ್ ಅನ್ನು ಸೋತ ನಂತರ ತಂಡದಲ್ಲಿ ಕೊಹ್ಲಿ ಮತ್ತು ರೋಹಿತ್ ಬಣ ಎನ್ನುವಂತಾಗಿದೆ. ಕೊಹ್ಲಿ ಇಲ್ಲದ ಸಮಯದಲ್ಲಿ ರೋಹಿತ್ ಶರ್ಮಾ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಅವರಿಗೆ ನಾಯಕನ ಸ್ಥಾನ ನೀಡುವುದರಿಂದ ಕೊಹ್ಲಿ ಒತ್ತಡ ಕಡಿಮೆ ಮಾಡಬಹುದಾಗಿದೆ ಎಂಬ ಚಿಂತನೆ ಇದೆ. ಒಟ್ಟಾರೆಯಾಗಿ ಈ ಬಾರಿ ಕಪ್ ನಮ್ದೆ ಎನ್ನುತ್ತಿದ್ದ ಟೀಂ ಇಂಡಿಯಾ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.
Comments