ವಾಟ್ಸ್ ಆಪ್ ದುರ್ಬಳಕೆ ಮಾಡಿದ್ರೆ ಶ್ರೀ ಕೃಷ್ಣನ ಜನ್ಮಸ್ಥಳ ಸೇರೋದು ಗ್ಯಾರೆಂಟಿ..!

ವಾಟ್ಸ್ ಆಪ್ ನಲ್ಲಿ ಬರುತ್ತಿರುವಂತಹ ಸುಳ್ಳು ಸುದ್ದಿಗಳಿಂದ ಸಾಕಷ್ಟು ಹತ್ಯೆಗಳು ನಡೆಯುತ್ತಿವೆ, ಸಾಮಾಜಿಕ ಜಾಲತಾಣದ ದುರ್ಬಳಕೆಯನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.
ಪ್ರಚೋದನಾಕಾರಿ ಅಂಶಗಳನ್ನು ವಾಟ್ಸ್ ಆಪ್ ಸೇರಿದಂತೆ ಹಲವು ರೀತಿಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವುದು ಆತಂಕದ ವಿಷಯ ಎಂದು ಭಾರತ ಸರ್ಕಾರ ತಿಳಿಸಿದೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಚೋದನಾಕಾರಿ ಅಂಶಗಳು, ಸುಳ್ಳು ಸುದ್ದಿಗಳು ವಾಟ್ಸ್ ಆಪ್ ನಲ್ಲಿ ಹಂಚಿಕೆಯಾಗುತ್ತಿರುವುದನ್ನು ಗಮನಾರ್ಹವಾಗಿ ಗಮನಿಸಿದೆ. ಇದರಿಂದಾಗಿ ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸುಳ್ಳು ಸುದ್ದಿ, ಪ್ರಚೋದನಾಕಾರಿ ಸುದ್ದಿಗಳು ಪ್ರಚಾರ ಪಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ವಾಟ್ಸ್ ಆಪ್ ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವಾಲಯ ಈಗಾಗಲೇ ತಿಳಿಸಿದೆ.
Comments