ವಿಧಾನಸಭೆ ಚುನಾವಣೆಗೆ ಸಿಎಂ ಸಾರಥ್ಯ
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎದುರಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ.
ಮುಂದಿನ ಚುನಾವಣೆಗೆ ನಾಯಕತ್ವ ಯಾರದ್ದು ಎಂಬ ಪ್ರಶ್ನೆ ಮೂಡಿತ್ತು. ಆದ್ರೆ ಇದೀಗ ಹೈಕಮಾಂಡ್ ತೆರೆ ಎಳೆದಿದ್ದು, ಇದೇ ಮೊದಲ ಬಾರಿಗೆ ಲಿಖಿತ ರೂಪದಲ್ಲಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರೇ ನಾಯಕ ಎಂಬ ಸಂದೇಶ ರವಾನೆಯಾಗಿದೆ. ಈ ಮೂಲಕ ಅಧಿಕೃತ ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಚನೆ ಮೇರೆಗೆ ೨೦೧೮ರ ಕರ್ನಾಟಕ ವಿಧಾನಸಭಾ ಚುನಾವಣೆಯ ನೇತೃತ್ವವನ್ನು
ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕೆಪಿಸಿಸಿ ಹಾಲಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
Comments