ಒಳ್ಳೆಯ ಕೆಲಸ ಮಾಡಿದ್ದೇವೆ; ಇದಕ್ಕೆ ನೀವು ಕೂಲಿ ಕೊಡಿ- ಜನತೆಯಲ್ಲಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ….
ನಾಲ್ಕು ವರ್ಷದ ಅವಧಿಯಲ್ಲಿ ನಾವು ಒಳ್ಳೆಯ ಕೆಲಸ ಮಾಡಿದ್ದೇವೆ, ಇದಕ್ಕೆ ನೀವು ನಮಗೆ ಕೂಲಿ ಕೊಡಿ. ದುಡಿಯುವ ಎತ್ತಿಗೆ ಹುಲ್ಲು ಹಾಕಿ, ಕಳ್ಳೆತ್ತಿಗೆ ಹುಲ್ಲು ಹಾಕಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯಲ್ಲಿ ಮನವಿ ಮಾಡಿದರು.
ಮೈಸೂರು,ಮೇ,31,2017
ನಾಲ್ಕು ವರ್ಷದ ಅವಧಿಯಲ್ಲಿ ನಾವು ಒಳ್ಳೆಯ ಕೆಲಸ ಮಾಡಿದ್ದೇವೆ, ಇದಕ್ಕೆ ನೀವು ನಮಗೆ ಕೂಲಿ ಕೊಡಿ. ದುಡಿಯುವ ಎತ್ತಿಗೆ ಹುಲ್ಲು ಹಾಕಿ, ಕಳ್ಳೆತ್ತಿಗೆ ಹುಲ್ಲು ಹಾಕಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯಲ್ಲಿ ಮನವಿ ಮಾಡಿದರು.
ಮೈಸೂರಿನ ಪಿರಿಯಾಪಟ್ಟಣದಲ್ಲಿ ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರಮೋದಿಯವರ ಮೂಗು ಹಿಡಿದುಕೊಂಡು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರಾಜ್ಯದ ರೈತರು ಮಾಡಿರುವ ಸಾಲ ಮನ್ನಾ ಮಾಡಿಸಲಿ ಎಂದು ಆಗ್ರಹಿಸಲಿ ಎಂದು ಒತ್ತಾಯಿಸಿದರು.
ರೈತರ ಸಾಲ ಮನ್ನಾ ಮಾಡುವ ಬಗ್ಗೆ ಕೇಂದ್ರದ ನಿರ್ಧಾರವನ್ನು ಇನ್ನೂ ಹಲವು ದಿನ ಕಾಯ್ದು ನೋಡುತ್ತೇನೆ. ಆ ಮೇಲೆ ನಾನು ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅತ್ಯಂತ ಮಾರ್ಮಿಕವಾಗಿ ನುಡಿದರು.
ಉಪ್ಪು ಕೊಟ್ಟವರನ್ನು ಮುಪ್ಪಿನ ತನಕ ನೆನೆದುಕೊಳ್ಳಬೇಕು ……
ಉಪ್ಪು ಕೊಟ್ಟವರನ್ನು ಮುಪ್ಪಿನ ತನಕ ನೆನೆದುಕೊಳ್ಳಬೇಕು. ಅಂತಯೇ ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದೆ. ಈ ಮಾತನ್ನು ನೆನಪಿನಲ್ಲಿಟ್ಟುಕೊಂಡು 2018ರ ಚುನಾವಣೆಯಲ್ಲೂ ವೆಂಕಟೇಶ್ ರನ್ನು ಮರು ಆಯ್ಕೆ ಮಾಡಬೇಕು ಎಂದು ಪಿರಿಯಾಪಟ್ಟಣ ಜನತೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋರಿದರು.
ಬಿಜೆಪಿ ಈಗಾಗಲೇ ಗೆದ್ದಿರುವ ಭ್ರಮೆಯಲ್ಲಿದ್ದಾರೆ….
ಬಿಜೆಪಿಯವರ ಈಗಾಗಲೇ ಗೆದ್ದಾಯಿತು ಎಂದು ಕೊಂಡಿದ್ದಾರೆ. ಆದರೆ ರಾಜ್ಯದ ಮತದಾರರು ಬುದ್ಧಿವಂತರು. ಅವರು ಒಳ್ಳೆಯ ಕಾರ್ಯ ಮಾಡುವವರನ್ನು ಎಂದೂ ಕೂಡ ಮರೆಯುವುದಿಲ್ಲ. ಅದರಂತೆ ನಮ್ಮ ಸರ್ಕಾರ ಒಳ್ಳೆಯ ಕೆಲಸವನ್ನ ಮಾಡಿದೆ. ಹೀಗಾಗಿ ಮುಂದಿನ 2018ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ, ಜೆಡಿಎಸ್ ನವರು ಏನೇ ಹೇಳಿಕೊಂಡು ತಿರುಗಿದರೂ, ಎಚ್.ಡಿ ದೇವೇಗೌಡರು ಕುಮಾರಸ್ವಾಮಿಯನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವುದೇ ತನ್ನ ಗುರಿಯೆಂದು ಹೇಳಿಕೊಂಡು ತಿರುಗಿದರೂ ಮತ್ತೊಮ್ಮೆ ನಾವೇ ಅಧಿಕಾರಕ್ಕೆ ಬರುತ್ತೇವೆ.
ಇನ್ನು ರಾಜ್ಯದಲ್ಲಿ ಸತತ ಬರಗಾಲ ಎದುರಾಗಿದ್ದರಿಂದ ವೇಗವಾಗಿ ಆರ್ಥಿಕ ಅಭಿವೃದ್ಧಿ ದರ ಹೆಚ್ಚಳ ಮಾಡಲು ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು.
Comments