ಬೆಳಗಾವಿಯಲ್ಲಿ ಜನಸಂಪರ್ಕ ಅಭಿಯಾನ



ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದಕ್ಕಾಗಿ ಸಂಘಟಿತರಾಗಿ ಪ್ರಯತ್ನಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದೆ.
ಜನಸಂಪರ್ಕ ಅಭಿಯಾನದ ಅಂಗವಾಗಿ 13ನೇ ಜಿಲ್ಲೆಯಾದ ಬೆಳಗಾವಿಯಲ್ಲಿ ಇಂದು ಪ್ರವಾಸ ಕೈಗೊಂಡಿದ್ದೇನೆ. ಶೋಷಿತರೆಡೆಗೆ ನಮ್ಮ ನಡಿಗೆಯನ್ನು ಮುಂದುವರೆಸಿ ದಲಿತ ಕಾಲೋನಿಗಳಲ್ಲಿ ಪಾದಯಾತ್ರೆ ನಡೆಸಿದೆ ಹಾಗು ದಲಿತರ ಮನೆಯಲ್ಲಿ ಅವರ ಆತಿಥ್ಯ ಸ್ವೀಕರಿಸಿದೆ. ನಂತರ ಕೆ.ಎಲ್.ಇ ಸಂಸ್ಥೆಯ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬರದಿಂದ ತತ್ತರಿಸಿರುವ ರೈತರ ನೆರವಿಗೆ ಬಾರದ ರಾಜ್ಯಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ನಂತರ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಸಸಿ ನೆಟ್ಟು, ರಾಮನಾಥ ಮಂಗಲದಲ್ಲಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಿದ್ದೇಶ್ವರ ದೇವಸ್ಥಾನದ ಉದ್ಘಾಟನೆ ಮಾಡಿ ನಂತರ ಕಾರ್ಯಕರ್ತರ ಸಭೆ ನಡೆಸಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದಕ್ಕಾಗಿ ಸಂಘಟಿತರಾಗಿ ಪ್ರಯತ್ನಿಸಬೇಕೆಂದು ಕಾರ್ಯಕರ್ತರಿಗೆ ಕರೆನೀಡಿದೆ.
ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದಕ್ಕಾಗಿ ಸಂಘಟಿತರಾಗಿ ಪ್ರಯತ್ನಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದೆ.
ಬೆಳಗಾವಿಯಲ್ಲಿ ಜನಸಂಪರ್ಕ ಅಭಿಯಾನ
Comments