ಉತ್ತರ ಕನ್ನಡ ಕಾರವಾರದಲ್ಲಿ ಜನಸಂಪರ್ಕ ಅಭಿಯಾನ

08 Jun 2017 1:35 PM |
1138 Report

ಮೊದಲಿಗೆ ಕಾರವಾರದ ದಲಿತ ಕಾಲೋನಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಅಭಿಯಾನವನ್ನು ಆರಂಭಿಸಿದೆ. ನಂತರ ಪತ್ರಿಕಾಗೋಷ್ಠಿ ನಡೆಸಿ ಬರದಿಂದ ತತ್ತರಿಸಿರುವ ರೈತರ ನೆರವಿಗೆ ಕೂಡಲೆ ಧಾವಿಸಬೇಕೆಂದು ರಾಜ್ಯಸರ್ಕಾರವನ್ನು ಒತ್ತಾಯಿಸಿದೆ

ನಿರಂತರವಾಗಿ ಸಾಗುತ್ತಿರುವ ಜನಸಂಪರ್ಕ ಅಭಿಯಾನವನ್ನು ಇಂದು ೧೪ ನೇ ಜಿಲ್ಲೆ ಉತ್ತರಕನ್ನಡದಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಾರವಾರದ ದಲಿತ ಕಾಲೋನಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಅಭಿಯಾನವನ್ನು ಆರಂಭಿಸಿದೆ. ನಂತರ ಪತ್ರಿಕಾಗೋಷ್ಠಿ ನಡೆಸಿ ಬರದಿಂದ ತತ್ತರಿಸಿರುವ ರೈತರ ನೆರವಿಗೆ ಕೂಡಲೆ ಧಾವಿಸಬೇಕೆಂದು ರಾಜ್ಯಸರ್ಕಾರವನ್ನು ಒತ್ತಾಯಿಸಿದೆ. ನಂತರ ನಗರದ ಮಾಲಾದೇವಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದೆ. ಕರಾವಳಿಯಲ್ಲಿದ್ದರೂ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸರ್ಕಾರ ಆಸಕ್ತಿ ತೋರದೆ ಇದ್ದರೆ ಇಲ್ಲಿಯ ಜನರ ಪರಿಸ್ಥಿತಿ ಗಂಭೀರವಾಗಬಹುದೆಂದು ಹೇಳಿದೆ.

ನಮ್ಮೊಂದಿಗೆ ಪ್ರತಿಜಿಲ್ಲೆಯಲ್ಲೂ ಪಕ್ಷದ ಎಲ್ಲಾ ಕಾರ್ಯಕರ್ತರು ಅತ್ಯಂತ ಹುಮ್ಮಸ್ಸಿನಿಂದ ಜನಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೋದ ಕಡೆಯಲ್ಲೆಲ್ಲಾ ಜನರು ಕೂಡ ನಿರೀಕ್ಷೆಗೂ ಮೀರಿ ಸ್ಪಂದಿಸುತ್ತಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು ಅಭಿಯಾನವನ್ನು ಮುಂದುವರೆಸಿ ಅಂಕೋಲಾದ ದಲಿತ ಕಾಲೋನಿಗಳಿಗೆ ಭೇಟಿ ನೀಡಿದೆ. ಅಲ್ಲಿನ ಜನ ತಮ್ಮ ಸಮಸ್ಯೆಗಳನ್ನು ನಮ್ಮ ಬಳಿ ಹೇಳಿಕೊಂಡರು. ಅವರ ಅಹವಾಲುಗಳನ್ನು ಸ್ವೀಕರಿಸಿ ನಂತರ ಕುಮಟಾದಲ್ಲಿ ಕಾರ್ಯಕರ್ತರ ಸಭೆ ನಡೆಸಿದೆ. ತದನಂತರ ಅಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಜನರ ಆಶೋತ್ತರಗಳಿಗೆ ಸ್ಪಂದಿಸುವ ಜನರ ನಡುವೆ ಕೆಲಸ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ನೆರೆದ ಸಭಿಕರಲ್ಲಿ ಕೋರಿದೆ.

Edited By

madhu mukesh

Reported By

Admin bjp

Comments