ಯೋಗಿ ಸರ್ಕಾರದ ವೈಫಲ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ತಿವಾರಿ ಕುಟುಂಬಸ್ಥರು
ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಅನುರಾಗ್ ತಿವಾರಿ ತಂದೆ, ತಾಯಿ, ಸಹೋದರ ಮಯಾಂಕ್ ತಿವಾರಿ ಹಾಗೂ ಮಯಾಂಕ್ ಅವರ ಪತ್ನಿಗೆ, ತಮ್ಮಿಂದ ಸಾಧ್ಯವಾಗುವ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
ಲಖ್ನೋದಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಕುಟುಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶೀಘ್ರವಾಗಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ನೆರವಿಗೆ ಸಂಬಂಧಿಸಿದಂತೆ ಕಾನೂನು ವ್ಯಾಪ್ತಿಯೊಳಗಿರುವ ಸಾಧ್ಯತೆಗಳನ್ನು ಪರಿಶೀಲಿಸಿ’ ಎಂದು ಸ್ಥಳದಲ್ಲೇ ಇದ್ದ ತಮ್ಮ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು.
ತಮ್ಮ ಪೋಷಕರು ಕಳೆದ 10 ವರ್ಷಗಳಿಂದ ಅನುರಾಗ್ ತಿವಾರಿ ಜೊತೆ ವಾಸಿಸುತ್ತಿದ್ದರು. ನಾವು ಇದುವರೆಗೂ ಉತ್ತರ ಪ್ರದೇಶದ ಕುಗ್ರಾಮವೊಂದರಲ್ಲಿ ಬದುಕುತ್ತಿದ್ದೇವೆ. ನಮಗೆ ನಗರದಲ್ಲಿ ವಾಸಿಸಲು ಒಂದು ಮನೆ ಕಲ್ಪಿಸಿಕೊಡುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ. ತಮ್ಮ ಕೈಯ್ಯಿಂದ ಸಾಧ್ಯವಾಗುವ ಎಲ್ಲಾ ರೀತಿಯ ಅನುಕೂಲ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ತಿವಾರಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರಿಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಸಹೋದರ ಮಯಾಂಕ್ ತಿಳಿಸಿದ್ದಾರೆ. 1981ರ ಮೇ 17ರಂದು ಜನಿಸಿದ್ದ ಅನುರಾಗ್ ತಿವಾರಿ, ಕಳೆದ ತಿಂಗಳು ತಮ್ಮ ಹುಟ್ಟುಹಬ್ಬದ ದಿನದಂದೇ ಸಾವನ್ನಪ್ಪಿದರು
Comments