ಚಾಮರಾಜನಗರ ಜಿಲ್ಲೆಯಲ್ಲಿ ಜನಸಂಪರ್ಕ ಅಭಿಯಾನವ



ಚಾಮರಾಜನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಅರಕಲವಾಡಿಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ರೈತರೊಂದಿಗೆ ಸಂವಾದ ನಡೆಸಿದೆ.
ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಜನಸಂಪರ್ಕ ಅಭಿಯಾನವನ್ನು ನಡೆಸಿದೆ. ಅಮಚವಾಡಿಯ ಹೆಗ್ಗಡಶೆಟ್ರು ಎಂಬ ದಲಿತರ ಮನೆಯಲ್ಲಿ ಭೋಜನ ಮಾಡಿದೆ, ಇದುವರೆಗೆ ಭೇಟಿ ನೀಡಿದ ಎಲ್ಲ ಜಿಲ್ಲೆಗಳಲ್ಲೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಯಾಗಿಸಿದ್ದಾರೆ. ಸಂತೇಮರಹಳ್ಳಿಯಲ್ಲೂ ಜನರು ಜಯಘೋಷಗಳೊಂದಿಗೆ ನಮ್ಮನ್ನು ಸ್ವಾಗತಿಸಿದರು. ಅಲ್ಲಿ ಸೇರಿದ್ದ ಸಹಸ್ರಾರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದೆ. ರಾಜ್ಯ ಸರ್ಕಾರ ಸಕಾಲದಲ್ಲಿ ರೈತರ ನೆರವಿಗೆ ಬಾರದೇ ಹೋದರೆ ಸತ್ಯಾಗ್ರಹ ನಡೆಸುವುದು ನಿಶ್ಚಿತ ಎಂದು ತುಂಬಿದ ಸಭೆಯಲ್ಲಿ ಹೇಳಿದೆ. ಸರ್ವ ಜನಾಂಗದ ಅಭ್ಯುದಯಕ್ಕಾಗಿ ಪಕ್ಷವನ್ನು ಬೆಂಬಲಿಸಿರೆಂದು ಜನರಲ್ಲಿ ನಿವೇದನೆ ಮಾಡಿದೆ. ನಂತರ ಕೊಳ್ಳೆಗಾಲದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಗೆ ಸರ್ವ ಸನ್ನದ್ಧರಾಗಲು ಮಾರ್ಗದರ್ಶನ.
ಮೊದಲಿಗೆ ಚಾಮರಾಜನಗರದಲ್ಲಿ ಗಿಡನೆಡುವ ಮೂಲಕ ಅಭಿಯಾನವನ್ನು ಆರಂಭಿಸಿದೆ. ನಂತರ ರಾಮ ಸಮುದ್ರದ ದಲಿತರ ಕಾಲೋನಿಗಳಲ್ಲಿ ಡಾ|| ಅಂಬೇಡ್ಕರ್ ಮತ್ತು ಬಾಬು ಜಗ ಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಪಾದಯಾತ್ರೆ ನಡೆಸಿದೆ. ದಲಿತರ ಆತಿಥ್ಯ ಸ್ವೀಕರಿಸಿ ಅಲ್ಲಿ ವಿವಿಧ ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿದೆ. ಎಲ್ಲೆಡೆ ಜನರು ತೋರುತ್ತಿರುವ ಪ್ರೀತಿ ವಿಶ್ವಾಸಗಳು ನಮ್ಮ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿವೆ.
Comments