ವಿಕೆಂಡ್ ವಿತ್ ರಮೇಶ್ : ಸಾಧಕರ ಸೀಟ್ ನಲ್ಲಿ ಕುಳಿತ ಸಿಎಂ ಸಿದ್ದರಾಮಯ್ಯ




ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರಸಿದ್ಧ ಕಾರ್ಯಕ್ರಮ ವಿಕೇಂಡ್ ವಿತ್ ರಮೇಶ್ ನಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿಗೆ ತೆರೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಗುರುವಾರ ಕಾರ್ಯಕ್ರಮದ ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಮನೋರಂಜನಾ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋಜಲ್ಲಿ ಕಾರ್ಯಕ್ರಮದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಶನಿವಾರ ಮತ್ತು ಭಾನುವಾರ ತಲಾ 90 ನಿಮಿಷಗಳ ಎರಡು ಎಪಿಸೋಡ್ ಗಳಲ್ಲಿ ಪ್ರಸಾರವಾಗಲಿದೆ. ಸಿಎಂ ಸಿದ್ದರಾಮಯ್ಯ ಬಾಲ್ಯದ ಕುರಿತು ಅವರು ನಡೆದು ಬಂದ ದಾರಿಯ ಕುರಿತು ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ದೊರಕಿದೆ.
ಸಿಎಂ ಸಿದ್ದರಾಮಯ್ಯ ಬಾಲ್ಯದ ವಿವರಗಳ ಕುರಿತು ಮಾಹಿತಿ ಕಲೆ ಹಾಕಲು ವರುಣಾ ಹೋಬಳಿಗೆ ತೆರಳಿ ಸಿಎಂ ಸ್ನೇಹಿತರು, ಗ್ರಾಮಸ್ಥರು ಹಾಗೂ ಶಿಕ್ಷಕರ ಸಂದರ್ಶನ ವನ್ನು ಪಡೆಯಲಾಗಿದೆ ಎಂದು ವಾಹಿನಿಯ ಅಧಿಕಾರಿಗಳು ತಿಳಿಸಿದ್ದಾರೆ.
Comments