ಉಡುಪಿ ಜಿಲ್ಲೆಯಲ್ಲಿ ಜನ ಸಂಪರ್ಕ ಅಭಿಯಾನ

ಜನ ಸಂಪರ್ಕ ಅಭಿಯಾನವನ್ನು ಇಂದು ಉಡುಪಿ ಜಿಲ್ಲೆಯಲ್ಲಿ ನಡೆಸಿದ್ದೇನೆ. ಉಡುಪಿಯ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರ 1 ಲಕ್ಷ ರೂ ವರೆಗಿನ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದೆ. ನಂತರ ಜಿಲ್ಲಾ ಪದಾಧಿಕಾರಿಗಳ ಮತ್ತು ಪ್ರಮುಖರ ಸಭೆ ಸಮಾಲೋಚನೆ ನಡೆಸಿ ಚುನಾವಣಾ ಕಾರ್ಯತಂತ್ರಗಳ ಕುರಿತು ಚರ್ಚಿಸಿದೆ. ಉಡುಪಿಯಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಶಾಶ್ವತ ನೀರಿನ ಸಮಸ್ಯೆಗಳನ್ನುಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದ್ದೇನೆ.
Comments