ವಿಜಯಪುರ ಜಿಲ್ಲೆಯಲ್ಲಿ ಜನಸಂಪರ್ಕ ಅಭಿಯಾನ

ಜನಸಂಪರ್ಕ ಅಭಿಯಾನದ ಯಶಸ್ಸು ಪಕ್ಷಸಂಘಟನೆಯ ಚಟುವಟಿಕೆಗಳಿಗೆ ಮತ್ತಷ್ಟು ಬಲನೀಡಿದೆ. ನಾಡಿನಾದ್ಯಂತ ಜನರು ಬಿಜೆಪಿಗೆ ನೀಡುತ್ತಿರುವ ಬೆಂಬಲ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಇಂದು ವಿಜಯಪುರ ಜಿಲ್ಲೆಯಲ್ಲಿ ಜನಸಂಪರ್ಕ ಅಭಿಯಾನವನ್ನು ನಡೆಸುತ್ತಿದ್ದೇನೆ. ಕತ್ನಳ್ಳಿ ಮಠದಲ್ಲಿ ಹಿರಿಯ ಮುಖಂಡರೊಡನೆ ಸಂವಾದ ನಡೆಸಿ ವಿಜಯಪುರದಲ್ಲಿ ಜಿಲ್ಲಾ ಪದಾಧಿಕಾರಿಗಳ ಹಾಗು ಕಾರ್ಯಕರ್ತರ ಸಭೆ ನಡೆಸಿದೆ. ಎಲ್ಲಾ ಕಾರ್ಯಕರ್ತರು ವಿಸ್ತಾರಕರಾಗಿ ಕೂಡ ಕಾರ್ಯನಿರ್ವಹಿಸಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕೆಂದು ಕರೆ ನೀಡಿದೆ. ನಂತರ ಬಬಲೇಶ್ವರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ ಎ೦ಬ ಬದ್ಧತೆಯನ್ನು ಜನರೊ೦ದಿಗೆ ಹ೦ಚಿಕೊ೦ಡೆ.
Comments