ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಎಸ್.ಆರ್.ಪಾಟೀಲ ಪದಗ್ರಹಣ

ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಬಳಿಕ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು.
‘ಸಚಿವರು ಮತ್ತು ಪಕ್ಷದ ಶಾಸಕರು ತಡ ಮಾಡದೆ ಚುನಾವಣಾ ತಯಾರಿಗೆ ಮುಂದಾಗಬೇಕು. ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ, ಮುಂದಿನ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಬೇಕು’ ಎಂದು ಸೂಚಿಸಿದರು.
‘ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ತೊಂದರೆಗೆ ಸಿಲುಕಿದಾಗಲೆಲ್ಲಾ ಕರ್ನಾಟಕದ ಜನ ಕೈಹಿಡಿದಿದ್ದಾರೆ. ಹಾಗಾಗಿ ಮುಂದಿನ ಚುನಾವಣೆ ಮಹತ್ವದ್ದಾಗಿದೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಮಾತುಕತೆ ಮೂಲಕ ಪರಿಹರಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಬೇಕು’ ಎಂದು ಕಿವಿಮಾತು ಹೇಳಿದರು.
Comments