ಕೋಡಿ ಶ್ರೀಗಳ ಭವಿಷ್ಯ: ಎಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹಾರ್ನಳ್ಳಿ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಯವರು ಹಾಸನದಲ್ಲಿ ಕಳೆದ ಶನಿವಾರ ಭವಿಷ್ಯ ನುಡಿದಿದ್ದಾರೆ. ತಾಳೆಗರಿ ಆಧಾರಿತ ಭವಿಷ್ಯ ನುಡಿಯುವ ಶ್ರೀಗಳು ಬಿತ್ತಿದ ಬೆಳಸು ಪರರು ಕೊಯ್ದಾರು ಎಂದು ಹೇಳಿದ್ದಾರೆ. ಬಿತ್ತಿದ ಬೀಜ ಬೆಳೆದು ಬಂದ ಪೈರು ಅಂದರೆ ಮುಂದಿನ 2018ರ ವಿಧಾನಸಭೆ ಚುನಾವಣೆ ಫಲಿತಾಂಶದ ಫಲವನ್ನು ಮತ್ಯಾರೋ ಉಣ್ಣುತ್ತಾರೆ ಎಂದು ಮಾರ್ಮಿಕವಾಗಿ ಹೇಳುವ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ಸೂಚಿಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿಗೆ ಬಹುಮತ ಬರುವ ಸಾಧ್ಯತೆ ಕಡಿಮೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಿಂಚಲಿದ್ದಾರೆ ಎಂದು ಅರ್ಥೈಸಬಹುದಾಗಿದೆ. ರಾಜ್ಯ ಮತ್ತು ರಾಷ್ಟ್ರದಲ್ಲಿ ಅಸ್ಥಿರತೆ ಪರಿಸ್ಥಿತಿ ಇಲ್ಲ. ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಜಯಕ್ಕಾಗಿ ಎಷ್ಟೇ ದುಡಿದರೂ ಅದರ ಲಾಭವನ್ನು ಅವರು ಪಡೆದುಕೊಳ್ಳುವ ಸಾಧ್ಯತೆ ಕಡಿಮೆ ಎಂದು ಶ್ರೀಗಳು ನುಡಿದಿದ್ದಾರೆ. ಬೇಕಾದ ಜಾಗದಲ್ಲಿ ಮಳೆ ಬಾರದೆ ಮಳೆಯ ತೀವ್ರ ಅವಶ್ಯಕತೆ ಇಲ್ಲದ ಪ್ರದೇಶದಲ್ಲಿ ಮಳೆ ಬರಲಿದೆ. ಹೀಗಾಗಿ ಅನ್ನ, ನೀರಿಗಾಗಿ ಪರದಾಡಬೇಕಾದ ದಿನಗಳು ಬರಬಹುದೆಂದು ಸ್ವಾಮೀಗಳು ಭವಿಷ್ಯ ನುಡಿದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳ ಲೆಕ್ಕಾಚಾರ ಉಲ್ಟಾ ಹೊಡೆಯಲಿದೆ ಎನ್ನುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿಗೆ ಶಾಕ್ ಆಗುವ ಭವಿಷ್ಯವನ್ನ್ನು ಕೋಡಿ ಶ್ರೀಗಳು ನುಡಿದಿದ್ದಾರೆ.
Comments