ಶ್ರಾವಣ ಮಾಸದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶ್ರಾವಣ ಮಾಸದಲ್ಲಿ ಬಿಡುಗಡೆ ಮಾಡುವುದಾಗಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರಕಟಿಸಿದರು.
ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶ್ರಾವಣ ಮಾಸದಲ್ಲಿ ಬಿಡುಗಡೆ ಮಾಡುವುದಾಗಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರಕಟಿಸಿದರು. ನಗರದ ಜೆ.ಪಿ.ಭವನದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಬೂತ್ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮೊದಲ ಕಂತಿನಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಈಗಾಗಲೇ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಬಳಿ ಪಟ್ಟಿ ಇದೆ. ಇದೀಗ ಆಷಾಢಮಾಸ ಇರುವುದರಿಂದ ಶ್ರಾವಣ ಮಾಸದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.
ಮೊದಲು 150 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆ ಪಟ್ಟಿ ಬಿಡುಗಡೆಗೊಳ್ಳಲಿದೆ. ಜ್ಯಾದ್ಯಂತ ಪಕ್ಷ ಸಂಘಟನೆ ಸೇರಿದಂತೆ ಎಲ್ಲಾ ರೀತಿಯ ಕಾರ್ಯಚಟುವಟಿಕೆಗಳ ಬಗ್ಗೆ ಇಂದು ನಡೆಯುತ್ತಿರುವ ಸಭೆಯಲ್ಲಿ ಚರ್ಚಿಸಲಾಗುವುದು. ಮುಂಬರುವ ಚುನಾವಣೆಗೆ ಬೂತ್‍ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕಾದ ರೀತಿ, ಸಜ್ಜುಗೊಳ್ಳಲು ನಡೆಸಬೇಕಾದ ತಯಾರಿ ಸೇರಿದಂತೆ ಇನ್ನಿತರ ವಿಷಯಗಳ ಸುದೀರ್ಘ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಬೂತ್‍ಮಟ್ಟದ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಸುರೇಶ್‍ಬಾಬು, ಶಾಸಕರಾದ ಬಿ.ವಿ.ನಿಂಗಯ್ಯ, ವೆಂಕಟಶಿವಾರೆಡ್ಡಿ, ನಾರಾಯಣಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ, ರಮೇಶ್‍ಬಾಬು, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಮತ್ತಿತರರು ಉಪಸ್ಥಿತರಿದ್ದರು.
Comments