ಚನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?
ಮುಂಬರುವ ವಿಧಾನಸಭೆ ಎಲೆಕ್ಷನ್ ನಲ್ಲಿ ಮಾಜಿಶಾಸಕಿ ಅನಿತಾ ಕುಮಾರಸ್ವಾಮಿ ಚನ್ನಪಟ್ಟಣ ದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಅನಿತಾ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಥಿಸಲು ಒಲವು ಹೊಂದಿದ್ದಾರೆ. ಅವರ ಸ್ಪರ್ಧೆ ಖಚಿತವಾದರೆ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗುತ್ತಿದೆ.
2013ರಲ್ಲಿ ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆಮಾಡಿದ್ದರು. ಆದರೆ 6 ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಸಿ.ಪಿ ಯೋಗೇಶ್ವರ್ ವಿರುದ್ಧ ಸ್ಪರ್ಧೆ ಮಾಡಿದ್ದ ಅನಿತಾ, ಯೋಗಿಶ್ವರ್ 80,099 ಮತ ಗಳಿಸಿದ್ರೆ, ಅನಿತಾ ಕುಮಾರಸ್ವಾಮಿ73,635 ಮತ ಗಳಿಸಿದ್ದರು. ಆದ್ದರಿಂದ ಮತ್ತೆ ಚನ್ನಪಟ್ಟಣದಿಂದಲೇ ಅನಿತಾರವರನ್ನು ಜೆಡಿಎಸ್ ನಿಂದ ಕಣಕ್ಕಿಳಿಸುವ ಉತ್ಸಾಹದಲ್ಲಿ ಜೆಡಿಎಸ್ ನಾಯಕರು ಇದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿದೇವೇಗೌಡರ ಕುಟುಂಬದಿಂದ ಒಟ್ಟು ನಾಲ್ಕು ಮಂದಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾಹಿತಿ ದೊರಕಿತ್ತು. ಗೌಡರ ಕುಟುಂಬದಿಂದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಹೆಚ್.ಡಿ ರೇವಣ್ಣ ಹೆಸರು ಖಚಿತವಾಗಿದೆ. ಈ ಲಿಸ್ಟ್ ನಲ್ಲಿ ರೇವಣ್ಣ ಪುತ್ರ ಹಾಗೂ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ.
Comments