ಜೆಡಿಎಸ್'ಗೆ ಸೇರ್ಪಡೆಯಾದ ಎಚ್.ವಿಶ್ವನಾಥ್
ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಮಾಜಿ ಸಂಸದ ಎಚ್.ವಿಶ್ವನಾಥ್ ಇಂದು ಜೆಡಿಎಸ್ ಸೇರ್ಪಡೆಯಾದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ವಿಶ್ವನಾಥ್ ಅವರನ್ನ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ವಿಶ್ವನಾಥ್ ಜೊತೆಗೆ ಮಾಜಿ ಶಾಸಕ ಎಚ್.ಡಿ. ಬಸವರಾಜು ಮತ್ತು ಬಸವರಾಜ ಕೊಣ್ಣೂರ್, ಮೈಸೂರು ಹಾಗೂ ಕೊಡಗು ಭಾಗದ ಹಲವು ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆಯಾದರು. ಈ ವೇಳೆ ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಬಗ್ಗೆ ಆರಂಭದಲ್ಲಿ ಅಸಮಾಧಾನ ಹೊಂದಿದ್ದ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸಹ ಭಾಗಿಯಾಗಿದ್ದರು.
Comments