ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ
ಮೈಸೂರು/ಕೋಲಾರ/ಮಂಡ್ಯ:-ಮೂರು ಜಿಲ್ಲೆಯ ವಿವಿಧ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ನಡೆದ ಉಪಚುನಾವಣೆಯಲ್ಲಿ ಎಲ್ಲಾ ಕಡೆ ಜಾತ್ಯತೀತ ಜನತಾದಳ (ಜೆಡಿಎಸ್) ಜಯಭೇರಿ ಬಾರಿಸಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಮುಖಭಂಗ ಅನುಭವಿಸಿವೆ. ಮೈಸೂರು ನಗರಪಾಲಿಕೆ 32ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‍ನ ಎಸ್‍ಬಿಎಂ ಮಂಜು.
ಕೋಲಾರ ನಗರಸಭೆ 21ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿಯೂ ಜೆಡಿಎಸ್‍ನ ಮೋಹನ್ ಪ್ರಕಾಶ್(ಬಾಬು) 158 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಮಂಡ್ಯ ನಗರಸಭೆ: 28ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‍ನ ರಾಜು ಅವರು ತಮ್ಮ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್‍ನ ದೇವಯ್ಯ ಅಲಿಯಾಸ್ ಪಾಪಣ್ಣ ಅವರನ್ನು 207 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
Comments