ಡಿ.ಕೆ.ಶಿ. ವಿರುದ್ದ ಕುಮಾರಸ್ವಾಮಿ ವಾಗ್ದಾಳಿ

06 Jul 2017 12:49 PM |
726 Report

ಸರಕಾರ ಕೆಪಿಟಿಸಿಎಲ್‌ಗೆ 16 ಸಾವಿರ ಕೋಟಿ ರೂಪಾಯಿ ಹೇಗೆ ಭರಿಸುತ್ತದೆ? ಎನ್ನುವುದನ್ನು ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗಪಡಿಸಲಿ

ಸರಕಾರದಿಂದ ಕೆಪಿಟಿಸಿಎಲ್‌ಗೆ 16 ಸಾವಿರ ಕೋಟಿ ರೂಪಾಯಿ ಬಾಕಿ ಬರಬೇಕಾಗಿದೆ. ಸರಕಾರ ಹಣ ಭರಿಸಲು ಮೀನಾಮೇಷ ಎಣಿಸುತ್ತಿದೆ. ಹೀಗೆ ಮುಂದುವರಿದಲ್ಲಿ ಕೆಪಿಟಿಸಿಎಲ್ ಬೀದಿಗೆ ಬರುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರಕಾರ ಕೆಪಿಟಿಸಿಎಲ್‌ಗೆ 16 ಸಾವಿರ ಕೋಟಿ ರೂಪಾಯಿ ಹೇಗೆ ಭರಿಸುತ್ತದೆ? ಎನ್ನುವುದನ್ನು ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಮುಂದಿನ ವರ್ಷ ಮಳೆ ಬಾರದಿದ್ದಲ್ಲಿ ಕೆಪಿಟಿಸಿಎಲ್ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

 ರಾಜ್ಯದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಎಷ್ಟಾಗಿದೆ? 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಸಾಧ್ಯವಾಗಿಲ್ಲ. ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Edited By

hdk fans

Reported By

hdk fans

Comments