ಸಿದ್ದರಾಮಯ್ಯ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಲೇವಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ತವರು ಮೈಸೂರು ಮಹಾನಗರ ಪಾಲಿಕೆಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದು ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ. ಅಷ್ಟೇ ಅಲ್ಲ ಮಂಡ್ಯ, ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಜೆಡಿಎಸ್ ಎಲ್ಲಿದೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಗಳಿಸಿರುವ ಲೀಡ್‌ನಷ್ಟು ಮತ ಕಾಂಗ್ರೆಸ್‌ಗೆ ಬಂದಿದೆ. ಸಮಾವೇಶಗಳಲ್ಲಿ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವ ಸಿದ್ದರಾಮಯ್ಯ ಇದಕ್ಕೆ ಏನು ಹೇಳ್ತಾರೆ. ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆಯಲ್ಲಿ ಗೆದ್ದು ಬೀಗಿದ ಅವರಿಗೆ ಮುಂದಿನ ಚುನಾವಣೆಯಲ್ಲಿ ಜನರು ಭ್ರಮೆ ಬಿಡುಸುತ್ತಾರೆ ಎಂದರು.
Comments