ಸಿಎಂ ಸಿದ್ದರಾಮಯ್ಯ : ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ
ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಸಂಬಂಧ ಮಂಗಳೂರು, ಬಂಟ್ವಾಳ ಸೇರಿದಂತೆ ಕರಾವಳಿ ಭಾಗ ಪ್ರಕ್ಷುಬದ್ಧವಾಗಿರುವಂತೆಯೇ, ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕೈಗೊಳ್ಳಿ ಎಂದೂ ಸಿಎಂ ಸೂಚನೆ ನೀಡಿದ್ದಾರೆ.
ಇನ್ನು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಪರಿಸ್ಥಿತಿಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದ ಸಿಎಂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿರುವುದಾಗಿ ಹೇಳಿದ್ದಾರೆ. ಕಾನೂನು ಉಲ್ಲಂಘನೆ ಯಾರೇ ಮಾಡಿದ್ದರೂ ಅವರು ಹಿಂದೂಗಳೇ ಆಗಿರಲಿ, ಇತರ ಯಾರೇ ಇರಲಿ… ತಪ್ಪು ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶ ಮಾಡಿದ್ದೇನೆ ಎಂದು ಹೇಳಿದ್ದಾರೆ.
Comments