ಬೆಂಗಳೂರಿನಲ್ಲಿ ಅಂಬೇಡ್ಕರ್ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ
ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಪ್ರಯುಕ್ತ ಜುಲೈ 21ರಿಂದ 23ರವರೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆ ಆವರಣದಲ್ಲಿರುವ ಸಮಾವೇಶ ಕೇಂದ್ರದಲ್ಲಿ Reclaiming Social Justice, Revisiting Ambedker ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರಗಳನ್ನು ನೀಡಿದರು. ಈ ಸಮ್ಮೇಳನದಲ್ಲಿ ಸುಮಾರು 2000ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದು, 83 ಅಂತಾರಾಷ್ಟ್ರೀಯ, 149 ರಾಷ್ಟ್ರೀಯ ಮತ್ತು 80 ರಾಜ್ಯದ ಭಾಷಣಕಾರರು ವಿಷಯ ಮಂಡಿಸಲಿದ್ದಾರೆ.

ಉದ್ಘಾಟನೆಯ ದಿನದಲ್ಲಿ ಮಾನವ ಹಕ್ಕುಗಳ ವಕೀಲ ಮತ್ತು ಕಾರ್ಯಕರ್ತ ಮಾರ್ಟಿನ್ ಲೂಥರ್ ಕಿಂಗ್-3 ಮತ್ತು ಸಂಸತ್ ಸದಸ್ಯ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
Comments