ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಡಿಕೆ ಸವಾಲ್
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ನೋಡೋಣ, ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿ ನೋಡೋಣ ಎಂದು ಸವಾಲು ಹಾಕಿದರು.
ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಏನು ಕೊಡುಗೆ ನೀಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಹಲವಾರು ವರ್ಷ ಈ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸಿದರೂ, ಸರಿಯಾಗಿ ಕುಡಿಯುವ ನೀರಿನ ಸೌಲಭ್ಯ ನೀಡಿಲ್ಲ, ಎಂದು ಹೇಳಿದರು. ಈ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲಿರುವ ಜಿ.ಟಿ.ದೇವೇಗೌಡ ಸ್ಪರ್ಧೆಯನ್ನು ಸವಾಲಾಗಿ ಸ್ವೀಕರಿಸಿ ಸಿದ್ದರಾಮಯ್ಯರನ್ನು ಸೋಲಿಸಬೇಕು, ಎಂದರು.
Comments