ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆ : ಹೆಚ್.ಡಿ ದೇವೇಗೌಡ
ರಾಜ್ಯ ವಿಧಾನಸಭೆಗೆ ಅವಧಿಗಿಂತ ಮೊದಲೇ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ ದೇವೇಗೌಡ ಅವರು ಹೇಳಿದರು.
ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಡೆಸಿರುವ ತಯಾರಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವಧಿಗೆ ಮೊದಲೇ ಚುನಾವಣೆ ನಡೆಯುವುದು ಬಹುತೇಕ ಖಚಿತ. ಹಾಗಾಗಿ, ನಮ್ಮ ಪಕ್ಷವು ಈಗಿನಿಂದಲೇ ಚುನಾವಣೆಗೆ ಎಲ್ಲ ತಯಾರಿಯನ್ನು ನಡೆಸಲಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ವರಿಷ್ಠರು ರಾಜ್ಯದ ವಿಧಾನಸಭೆಗೆ ಬೇಗ ಚುನಾವಣೆ ನಡೆಯುವುದನ್ನು ಅರಿತೇ ಹೊಸ ಉಸ್ತುವಾರಿಯನ್ನು ನೇಮಕ ಮಾಡಿ ಜತೆಗೆ 5 ಜನ ಕಾರ್ಯದರ್ಶಿಗಳನ್ನು ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ನಿಯೋಜಿಸಿರುವುದು. ಹಾಗೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಮುಂದಿನ ದಿನಗಳಲ್ಲಿ ಇಲ್ಲಿಯೇ ವಾಸ್ತವ್ಯ ಹೂಡಲು ಮುಂದಾಗಿರುವುದು ಎಲ್ಲವನ್ನೂ ಗಮನಿಸಿದರೆ ನನ್ನ ಪ್ರಕಾರ ಅವಧಿಗೆ ಮೊದಲೇ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ ಎಂದರು.
Comments