ದೇವೇಗೌಡರ ನೇತೃತ್ವದಲ್ಲಿ ಶಾಂತಿ ಸಭೆ: ಎಚ್ಡಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಂತಿ ಪುನರ್ ಸ್ಥಾಪಿಸಲು ದೇವೇಗೌಡರ ನೇತೃತ್ವದಲ್ಲಿ ಶೀಘ್ರವೇ ಶಾಂತಿ ಸಭೆ ನಡೆಸಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಂತಿ ಪುನರ್ ಸ್ಥಾಪಿಸಲು ದೇವೇಗೌಡರ ನೇತೃತ್ವದಲ್ಲಿ ಶೀಘ್ರವೇ ಶಾಂತಿ ಸಭೆ ನಡೆಸಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
‘ಶಾಂತಿ ಸಭೆಗೆ ವಿವಿಧ ಧರ್ಮಗಳ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರನ್ನು ಆಹ್ವಾನಿಸಲಾಗುವುದು. ಅವರು ಬರಲಿ, ಬಿಡಲಿ ನಾಲ್ಕೈದು ದಿನಗಳ ಒಳಗೆ ಮಂಗಳೂರಿನಿಂದ ಕಲ್ಲಡ್ಕದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.
‘ಬಂಟ್ವಾಳದ ಗಲಭೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರಣ. ಪಕ್ಷವನ್ನು ಬಲಿಷ್ಠಗೊಳಿಸಲು ಈ ಎರಡೂ ಪಕ್ಷಗಳು ಗಲಭೆಗೆ ಕುಮ್ಮಕ್ಕು ನೀಡುತ್ತಿವೆ. ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಅಮಾಯಕ ಕುಟುಂಬಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಉದ್ರೇಕದ ಹೇಳಿಕೆ ನೀಡುವ ಬದಲು ಸೌಹಾರ್ದ ಕಾಪಾಡುವ ಕೆಲಸವನ್ನು ಎರಡೂ ಪಕ್ಷಗಳ ನಾಯಕರುಗಳು ಮಾಡಬೇಕು’ ಎಂದು ಅವರು ಸಲಹೆ ನೀಡಿದರು.
Comments