ಬೆಂಗಳೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 126ನೆ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜುಲೈ 23 ರಿಂದ 25 ರೊಳಗೆ ಸಮ್ಮೇಳನ ನಡೆಯಲಿದೆ ಎಂದು ಹೇಳಿದ್ದಾರೆ. ಸಮ್ಮೇಳನದಲ್ಲಿ ದೇಶ-ವಿದೇಶಗಳಿಂದ ಅಂತಾರಾಷ್ಟ್ರೀಯ ಖ್ಯಾತಿಯ ಪ್ರಜ್ಞಾವಂತರು, ವಿಚಾರಶೀಲರು ಭಾಗವಹಿಸಲಿದ್ದಾರೆ.
ಸಮಾನತೆಯ ಅನ್ವೇಷಣೆ ಎಂಬ ಧ್ಯೆಯ ವಾಕ್ಯದೊಂದಿಗೆ ಸಮ್ಮೇಳನ ನಡೆಯಲಿದೆ ಎಂದರು. 83 ಅಂತಾರಾಷ್ಟ್ರೀಯ, 149 ರಾಷ್ಟ್ರೀಯ, 80 ರಾಜ್ಯ ಮಟ್ಟದ ಭಾಷಣಕಾರರು ಭಾಗವಹಿಸಲಿದ್ದಾರೆ. 2000ಕ್ಕೂ ಹೆಚ್ಚು ಆಹ್ವಾನಿತರು ಆಗಮಿಸಲಿದ್ದು, ವಕೀಲ ಹಾಗೂ ಮಾನವಹಕ್ಕುಗಳ ಕಾರ್ಯಕರ್ತ ಮಾರ್ಟಿನ್‍ಲೂಥರ್ ಕಿಂಗ್, ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Comments