ಸಿಎಂ ಸಿದ್ದರಾಮಯ್ಯಗೆ ಎಚ್.ಡಿ.ಕುಮಾರಸ್ವಾಮಿ ಸವಾಲ್
ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆಗೂ ಮತ್ತೊಮ್ಮೆ ಮುಖ್ಯಮಂತ್ರಿ ಆಗಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮೊದ್ಲು ನೀವು ಶಾಸಕರಾಗಿ ಆಯ್ಕೆಯಾಗ್ತೀರಾ ನೋಡಿ ಎಂದು ಸವಾಲ್ ಹಾಕಿದ್ದಾರೆ.
ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ. ಭ್ರಮೆಯಲ್ಲಿ ತೇಲಾಡಬೇಡಿ ನೀವಿಬ್ಬರು ನಮ್ಮಪ್ಪನಾಣೆಗೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.
Comments