ಜು. 17 ಕಾಂಗ್ರೆಸ್ ಶಾಸಕಾಂಗ ಸಭೆ
ಬೆಂಗಳೂರು: ಈ ತಿಂಗಳ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ಹಿನ್ನಲೆಯಲ್ಲಿ 17ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ವಿಶೇಷ ಸಭೆಯನ್ನು ಕರೆಯಲಾಗಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ವಿಧಾನ ಇವುಗಳ ಬಗ್ಗೆ ಮಾಹಿತಿ ನೀಡಿ ಯುಪಿಎ ಅಭ್ಯರ್ಥಿ ಮೀರಾಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲ ಶಾಸಕರು ಮತ ಹಾಕಲು ಕಟ್ಟುನಿಟ್ಟಿನ ಸೂಚನೆಯನ್ನು ಈ ಸಭೆಯಲ್ಲಿ ನೀಡಲಾಗುವುದು ಎಂದು ಪಕ್ಷ0 ಮೂಲಗಳು ಹೇಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ 17ರ ಬೆಳಿಗ್ಗೆ 9 ಗಂಟೆಗೆ ಈ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.
Comments