ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಇಚ್ಛಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಉಪ ಚುನಾವಣೆಯಲ್ಲಿ ಈ ಕ್ಷೇತ್ರ ಮರುಜನ್ಮ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರದ ಜನತೆ ನನ್ನನ್ನು ಐದು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಮುಂದೆಯೂ ಇದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಿದ್ದೇನೆ ಎಂದು ಹೇಳಿದ್ದಾರೆ.
ವರುಣಾ ಕ್ಷೇತ್ರಕ್ಕೆ ನನಗೆ ಹೆಚ್ಚಾಗಿ ಬರಲು ಸಾಧ್ಯವಾಗುತ್ತಿಲ್ಲ. ಹಿಂದೆ ನನ್ನ ಮಗ ರಾಕೇಶ್ ಬರುತ್ತಿದ್ದ. ಈಗ ಯತೀಂದ್ರ ಬರುತ್ತಿದ್ದಾನೆ ಎಂದು ಹೇಳಿದ್ದಾರೆ. ಯತೀಂದ್ರ ವರುಣಾಕ್ಷೇತ್ರದಿಂದ ಸ್ಪರ್ಧಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದರ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.
Comments