ಡಿಐಜಿ ರೂಪಾ ವರ್ಗಾವಣೆ ವಿರೋಧಿಸಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿಗಳಿಗೆ ಕಾನೂನುಬಾಹಿರವಾಗಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿ ವರ್ಗಾವಣೆಯಾಗಿದ್ದ ಡಿಐಜಿ ರೂಪಾ ಅವರ ವರ್ಗಾವಣೆ ರದ್ದುಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ದಕ್ಷ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹಲವಾರು ಹಿರಿಯ ಪ್ರಾಮಾಣಿಕ ಅಧಿಕಾರಿಗಳ ಶೋಷಣೆ ಮಾಡಲಾಗಿದೆ. ಭ್ರಷ್ಟರ ವಿರುದ್ಧ ಕ್ರಮಕೈಗೊಂಡ ಅಧಿಕಾರಿಗಳನ್ನೇ ಸರಕಾರ ಗುರಿಯಾಗಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಡಿಐಜಿ ರೂಪಾ ಅವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸಬೇಕು. ಪರಪ್ಪನ ಅಗ್ರಹಾರ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.
Comments