ಬೆಂಗಳೂರಲ್ಲಿ ಇಂದು ಜೆಡಿಎಸ್ ಮಹಿಳಾ ಸಮಾವೇಶ

20 Jul 2017 9:56 AM |
714 Report

ನಗರದ ಅರಮನೆ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ಹಮ್ಮಿಕೊಂಡಿದೆ

ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಸಮಾವೇಶಗಳಿಗೆ ಮುಂದಾಗಿರುವ ಜೆಡಿಎಸ್‌ ಗುರುವಾರ "ಮಹಿಳಾ ಸಮಾವೇಶ' ಹಮ್ಮಿಕೊಂಡಿದೆ. ನಗರದ ಅರಮನೆ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಲಿದ್ದಾರೆ. ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾ, ತಾಲೂಕು, ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳ ಮಹಿಳಾ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಘಟಕದ ಧ್ಯಕ್ಷರಿಗೆ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಸಮಾವೇಶದಲ್ಲಿ ಜನತಾಪಕ್ಷ, ಜನತಾದಳ ಹಾಗೂ ಜೆಡಿಎಸ್‌ ಆಡಳಿತಾವಧಿಯಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಮಹಿಳೆಯರಿಗಾಗಿ ರೂಪಿಸಿದ ಯೋಜನೆ ಹಾಗೂ ಮಹಿಳಾ ಮೀಸಲಾತಿ ಕುರಿತ ತೀರ್ಮಾನಗಳು, ಮುಂದೆ ಜೆಡಿಎಸ್‌ ಸರ್ಕಾರ ಬಂದರೆ ಕೈಗೊಳ್ಳುವ ಕಾರ್ಯಕ್ರಮ ಗಳನ್ನೊಳಗೊಂಡ ಕಿರುಪುಸ್ತಕ ಬಿಡುಗಡೆ ಮಾಡಲಾಗುವುದು.

Edited By

jds admin

Reported By

jds admin

Comments