ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಭಾಗ್ಯ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ "ವಾರ್ಷಿಕ 2.5 ಲಕ್ಷ ರೂ. ಆದಾಯ ಮಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 300 ಕೋಟಿ ರೂ.ವೆಚ್ಚ ತಗುಲಿದೆ ಎಂದರು".
Comments