ಆ. 15ಕ್ಕೆ 125 ಕಡೆ ಇಂದಿರಾ ಕ್ಯಾಂಟೀನ್ ಆರಂಭ
ಬಿಬಿಎಂಪಿಯ 198 ವಾರ್ಡ್ಗಳಲ್ಲಿ ಆ. 15ರಂದು ಏಕಕಾಲಕ್ಕೆ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಘೋಷಿಸಿದ್ದ ಸರಕಾರ ಇದೀಗ ತಾಂತ್ರಿಕ ಕಾರಣ, ವಿವಾದಗಳ ಹಿನ್ನೆಲೆಯಲ್ಲಿ ಆ. 15ಕ್ಕೆ 125 ವಾರ್ಡ್ಗಳಲ್ಲಿ ಕ್ಯಾಂಟೀನ್ ಶುರು ಮಾಡುವುದಾಗಿ ಪ್ರಕಟಿಸಿದೆ.
ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ ಬೆನ್ನಲ್ಲೇ ಜೂನ್ ಮೊದಲ ವಾರ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಹೇಳಿದ್ದರು. ತಾಂತ್ರಿಕ ಸಮಸ್ಯೆ ಎದುರಾದ ಅನಂತರ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಉದ್ಘಾಟಿಸುವ ಘೋಷಣೆ ಮಾಡಲಾಗಿತ್ತು. ಆದರೆ ಈಗ ಎರಡು ಕಂತುಗಳಲ್ಲಿ ಕ್ಯಾಂಟೀನ್ ಆರಂಭಿಸಲು ಸರಕಾರ ನಿರ್ಧರಿಸಿದೆ. ಯೋಜನೆ ಜಾರಿ ವಿಳಂಬಕ್ಕೆ ಕೆಲವು ತಾಂತ್ರಿಕ ಅಡಚಣೆಗಳು ಕಾರಣ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಇಂದಿರಾ ಕ್ಯಾಂಟೀನ್ ಯೋಜನೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ ಅವರು, 125 ವಾರ್ಡ್‌ಗಳಲ್ಲಿ ಆ. 15ರಂದು ಇಂದಿರಾ ಕ್ಯಾಂಟೀನ್ ಕಾರ್ಯಾರಂಭವಾಗಲಿದ್ದು, ಉಳಿದೆಡೆ ಅ. 2ರಂದು ಕ್ಯಾಂಟೀನ್ ಆರಂಭಿಸಲಾಗುವುದು ಎಂದರು.
Comments