ಹೆಚ್.ಡಿ.ಕುಮಾರಸ್ವಾಮಿರವರು ಎರಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಾಲಿದರೆ !
ನಗರದ ಜೆಎಸ್‍ಎಸ್ ಕಾಲೇಜು ಆವರಣದಲ್ಲಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಭಾನುವಾರ ಉ. ಕರ್ನಾಟಕ ಸಮಸ್ಯೆಗಳ ಕುರಿತು ನಡೆದ ಸಾರ್ವಜನಿಕರೊಂದಿಗಿನ ಮುಕ್ತ ಸಂವಾದದಲ್ಲಿ ಪಾಲ್ಗೊಂಡ ಅವರು, ಉತ್ತರ ಕರ್ನಾಟಕದಿಂದ ನಾನು ಸ್ಪರ್ಧಿಸಬೇಕೆಂಬ ಇಚ್ಛೆ ಹಲವರದ್ದಾಗಿದೆ. ಹೀಗಾಗಿ ನರೇಂದ್ರ ಮೋದಿ ಅವರು ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿ ಸ್ಪರ್ಧಿಸಿದಂತೆ ನಾನು ಉತ್ತರ ಹಾಗೂ ದ. ಕರ್ನಾಟಕದ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಅದು ವಿಜಯಪುರ ಆಗಿರಬಹುದು ಎಂದು ರವಿ ನಾಗಾವಿ ಎಂಬುವವರ ಪ್ರಶ್ನೆಗೆ ಹೆಚ್‍ಡಿಕೆ ಉತ್ತರಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಬಸವರಾಜ ಹೊರಟ್ಟಿ, ಎನ್.ಎಚ್,ಕೋನರಡ್ಡಿ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
Comments