'ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚುವ ಕೆಲಸದಲ್ಲಿ ತೊಡಗಿದರೆ ' : ಕೆ.ಎಸ್.ಈಶ್ವರಪ್ಪ
ಸಮಾಜದ ಎಲ್ಲರನ್ನೂ ಸಮಾನವಾಗಿ ಕಾಣಬೇಕಾದ ಮುಖ್ಯಮಂತ್ರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಮತಗಳಿಕೆಗಾಗಿ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ. ಈವರೆಗೂ ಕಾಂಗ್ರೆಸ್ ಮತ ಬ್ಯಾಂಕ್ ಆಗಿದ್ದ ಮುಸ್ಲಿಮರ ಮತಗಳು ಕೈತಪ್ಪುತ್ತಿವೆ ಎಂಬ ಭಯ ಸಿದ್ದರಾಮಯ್ಯರನ್ನು ಕಾಡುತ್ತಿದೆ ಎಂದು ಹೇಳಿದರು.
ಆರೆಸ್ಸೆಸ್, ಹಿಂದೂ ಸಮಾಜದ ಮುಖಂಡರ ಕೊಲೆಯಾಗುತ್ತಿದ್ದರೂ ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುತ್ವದ ಆಲೋಚನೆಯ ಅಧಿಕಾರಿಗಳನ್ನೂ ಹತ್ತಿಕ್ಕುವ ಮಾತಾಡುತ್ತಿದ್ದಾರೆ .ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಬೇಡ್ಕರ್ ಸಮಾವೇಶ ದುರುಪಯೋಗ ಮಾಡಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಈಗ ಅವರಿಗೆ ಅಂಬೇಡ್ಕರ್ ನೆನಪಾಗುತ್ತಿದ್ದಾರೆ. ಇದೇ ಕಾಂಗ್ರೆಸ್ ನಾಯಕರು ಅಂದು ಅಂಬೇಡ್ಕರ್ ಅವರನ್ನೇ ಚುನಾವಣೆ ಯಲ್ಲಿ ಸೋಲಿಸಿದ್ದರು. ಅವರು ನಿಧನರಾದಾಗ ಅಂತ್ಯಸಂಸ್ಕಾರಕ್ಕೂ ದೆಹಲಿಯಲ್ಲಿ ಜಾಗ ನೀಡಲಿಲ್ಲ ಎಂದು ಟೀಕಿಸಿದರು.
Comments