ರಾಜ್ಯಾದ್ಯಂತ ಸ್ಮಾರ್ಟ್ ಗ್ರಿಡ್ ವಿಸ್ತರಣೆಗೆ ಕ್ರಮ: ಡಿಕೆಶಿ
ದೇಶದಲ್ಲೇ ಪ್ರಥಮಬಾರಿಗೆ ಪ್ರಾಯೋಗಿಕವಾಗಿ ಕೈಗೊಂಡಿರುವ ಸ್ಮಾರ್ಟ್ ಗ್ರಿಡ್ ಯೋಜನೆ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಮೈಸೂರು ಸೇರಿದಂತೆ ರಾಜ್ಯದ ಇನ್ನಿತರ ನಗರಗಳಿಗೂ ವಿಸ್ತರಿಸಲು ಕ್ರಮಕೈಗೊಳ್ಳುವುದಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಕಚೇರಿಗೆ ಭೇಟಿ ನೀಡಿ ಪ್ರಾಯೋಗಿಕ ಸ್ಮಾರ್ಟ್ ಗ್ರಿಡ್ ಯೋಜನೆಯ ಪ್ರಗತಿ ಪರಿಶೀಲಿಸಿ, ಯೋಜನೆಯ ಕಾರ್ಯದ ಬಗ್ಗೆ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ವರ್ಷ ಕೇಂದ್ರ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದ ದಂತೆ ಸ್ಮಾರ್ಟ್‌ಗ್ರಿಡ್ ಯೋಜನೆ ಆರಂಭಿಸಲಾಗಿದ್ದು, ಅದರಂತೆ ಮೊದಲ ಬಾರಿಗೆ ಮೈಸೂರಿನಲ್ಲಿ ಸ್ಮಾರ್ಟ್‌ಗ್ರಿಡ್ ಯೋಜನೆ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಸ್ಮಾರ್ಟ್‌ಗ್ರಿಡ್‌ಯೋಜನೆಯನ್ನು ಮೈಸೂರಿನ ಜತೆಗೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯಾಪ್ತಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ ಎಂದರು.
Comments