ರಾಜಕೀಯ ಪ್ರೇರಿತ ಐಟಿ ದಾಳಿ ವಿರೋಧಿಸಿ ಜನಾಂದೋಲನ: ಸಿಎಂ
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಐಟಿ ದಾಳಿ ವಿರೋಧಿಸಿ ಜನಾಂದೋಲನ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯರಿಗೆ ಕರೆ ಮಾಡಿ, ಶಿವಕುಮಾರ್ ಬೆಂಬಲಕ್ಕೆ ನಿಲ್ಲುವಂತೆ ಆದೇಶ ನೀಡಿದ್ದಾರೆ. ರಾಜಕೀಯ ಪ್ರೇರಿತ ದಾಳಿಯ ವಿರುದ್ಧ ಜನಾಂದೋಲನ ನಡೆಸುವಂತೆ ಕೂಡ ಕರೆ ನೀಡಿದ್ದಾರೆ ಎನ್ನಲಾಗಿದೆ.
ಜನಾಂದೋಲನದಲ್ಲಿ ಪಕ್ಷದ ಎಲ್ಲಾ ಮುಖಂಡರು ಪಾಲ್ಗೊಂಡು ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರದಲ್ಲಿರುವ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅಧಿಕಾರ ದುರ್ಬಳಕೆ ಮಾಡಿಕೊಂಡು ವಿಪಕ್ಷಗಳ ನಾಯಕರನ್ನು ತುಳಿಯಲು ಪ್ರಯತ್ನಿಸುತ್ತಿದೆ. ಆದರೆ, ಇಂತಹ ಪ್ರಯತ್ನಗಳು ವಿಫಲವಾಗಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Comments