ರಾಜರಾಜೇಶ್ವರಿ ನಗರದಿಂದ ಸ್ಪರ್ಧೆ, ಪ್ರಜ್ವಲ್ ರೇವಣ್ಣ ಇಂಗಿತ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ 27ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಪ್ರಜ್ವಲ್, ಸೂಟ್ಕೇಸ್ ಸಂಸ್ಕ್ರತಿಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಪಶ್ಚಾತಾಪ ಪಟ್ಟಿದ್ದೇನೆ.ಯಾವುದೇ ಒಂದು ಉದ್ವೇಗದಲ್ಲಿ ಅಂತಹ ಮಾತು ಬಂದಿದೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನಗೆ ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ, ನೋಟಿಸ್‌ಗೆ ಉತ್ತರ ನೀಡಿದ್ದೇನೆ. ಮುಂದೆ ಅಂತಹ ಯಾವುದೇ ತಪ್ಪು ಮಾಡುವುದಿಲ್ಲ ಎಂದು ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
ಹುಣಸೂರು. ಬೇಲೂರು ಕ್ಷೇತ್ರಗಳು ಬೇರೆಯವರ ಪಾಲಾಗಿದ್ದರಿಂದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಟಿಕೆಟ್ ಕೊಟ್ಟಲ್ಲಿ ಸ್ಪರ್ಧಿಸುವುದಾಗಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
Comments