ಬಿಜೆಪಿ ಕಾರ್ಯಕಾರಿಣಿ ಸಭೆಯ ಪ್ರಮುಖ ನಿರ್ಣಯಗಳು

07 Aug 2017 11:05 AM |
3170 Report

ಬೆಂಗಳೂರು: ಪಕ್ಷದ ನಾಯಕರ ನಡುವಿನ ಭಿನ್ನಮತದಿಂದ ಈ ಹಿಂದೆ ಎರಡು ಬಾರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗಳು ಗೊಂದಲದ ಗೂಡಾಗಿದ್ದರೆ, ಭಾನುವಾರ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕಾರಿಣಿ ಯಾವುದೇ ಸಮಸ್ಯೆ ಇಲ್ಲದೆ ಸುಗಮವಾಗಿ ಮುಕ್ತಾಯಗೊಳ್ಳುವುದರೊಂದಿಗೆ ಪಕ್ಷ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ನೀರಾವರಿಗೆ ಹಣ ನೀಡದೆ ಇರುವುದು, ಬರದ ಅಸಮರ್ಪಕ ನಿರ್ವಹಣೆ, ಅನುದಾನ ದುರುಪಯೋಗ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ವಿವಿಧ ವಿಷಯದಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿರುವ ಕುರಿತು  ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕಾರ್ಯಕಾರಿಣಿ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಕುರಿತಂತೆ ನಿರ್ಣಯಗಳನ್ನು ಕಾರ್ಯಕಾರಿಣಿಯಲ್ಲಿ ಮಂಡಿಸಿ, ಅದರ ವಿರುದ್ಧ ಹೋರಾಟಕ್ಕೆ ತೀರ್ಮಾನ ಕೈಗೊಳ್ಳಲಾಯಿತು ಎಂದು ಹೇಳಿದರು.

ಕಳೆದ 4 ವರ್ಷದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ವಿವಿಧ ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಬಂದಿರುವ ಅನುದಾನದ ದುರುಪಯೋಗವಾಗುತ್ತಿರುವ ಬಗ್ಗೆ ಅನುಮಾನ ಹುಟ್ಟಿದೆ. ಧ್ವಜ, ಧರ್ಮ ಹಾಗೂ ಭಾಷೆಯ ವಿಷಯವಾಗಿ ರಾಜ್ಯ ಸರ್ಕಾರ ಗೊಂದಲ ಸೃಷ್ಟಿಸುತ್ತಿರುವ ಬಗ್ಗೆ ಜನರಿಗೆ ತಲುಪಿಸಲು ಕಾರ್ಯಕಾರಣಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

Edited By

Admin bjp

Reported By

Admin bjp

Comments