ಕೇಂದ್ರದ ಗುಪ್ತ ಸರ್ವೆ ಪ್ರಕಾರ ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ: ಬಿಎಸ್ ವೈ

07 Aug 2017 11:48 AM |
16591 Report

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸರ್ಕಾರದ ಗುಪ್ತ ಸರ್ವೆ ಪ್ರಕಾರ ತಿಳಿದು ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇವಲ ಅಧಿಕಾರಕ್ಕೆ ಬರುವುದು ಮಾತ್ರ ನಮ್ಮ ಗುರಿಯಾಗಬಾರದು. ಕನಿಷ್ಠ 150 ಸ್ಥಾನ ಗೆಲ್ಲುವುದಕ್ಕೆ ಶ್ರಮಿಸಬೇಕು. ನಾವು ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು. ರಾಜ್ಯದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ನಾವು ಪ್ರಬಲ ಪೈಪೋಟಿ ನೀಡಬೇಕೆಂದು ಕರೆ ಕೊಟ್ಟರು.

ಪಕ್ಷಕ್ಕೆ ಸೇರ್ಪಡೆಯಾದ ಎಲ್ಲರಿಗೂ ಟಿಕೆಟ್ ಕೊಡುವುದಿಲ್ಲ. ಆದರೆ ಹೊಸಬರ ಸೇರ್ಪಡೆ ಬಿಜೆಪಿಯಲ್ಲಿ ಮುಂದುವರಿಯಲಿ ಎಂದು ಕರೆ ಕೊಟ್ಟರು.
ನಾವು ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಬೇಕು. ಸರ್ಕಾರ ನೀಡಿರುವ ಪೊಳ್ಳು ಭರವಸೆಗಳನ್ನು ತಿಳಿಸುವ ಮೂಲಕ ಜನ ಜಾಗೃತಿ ಮೂಡಿಸಬೇಕೆಂದು ಕರೆ ಕೊಟ್ಟರು.

Edited By

Admin bjp

Reported By

Admin bjp

Comments