ರಾಜ್ಯ ಸರ್ಕಾರದಿಂದ ಪದವಿ ವಿದ್ಯಾರ್ಥಿಗಳಿಗೆ ಮತ್ತೊಂದು ಭಾಗ್ಯ

ರಾಜ್ಯ ಸರ್ಕಾರ ಎಲ್ಲಾ ಜಾತಿ ವರ್ಗಗಳ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ತಿರ್ಮಾನಿಸಿದೆ. ಆದರೆ ಕುಟುಂಬದ ವಾರ್ಷಿಕ ಆದಾಯ ಮಿತಿ 2.5 ಲಕ್ಷ ರೂ. ದಾಟಿರಬಾರದು ಎಂದು ಉನ್ನತ ಶಿಕ್ಷಣ ಸಚಿವ ಬಸವಾರಾಜ್ ರಾಯರೆಡ್ಡಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಎಲ್ಲಾ ಜಾತಿಯ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ನೀಡ್ತಿವೆ. ಒಟ್ಟು 300 ಕೋಟಿ ರೂ. ವೆಚ್ಚದಡಿ, 1.5 ಲಕ್ಷ ವಿದ್ಯಾರ್ಥಿಗಳಿಗೆ ಉತ್ತಮ ದರ್ಜೆಯ ಲ್ಯಾಪ್ ಟಾಪ್ ಒದಗಿಸಲಾಗುವುದು.ಈ ಬಗ್ಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ತಿಳಿಸಿದ್ದಾರೆ.
Comments