ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ದೇವೇಗೌಡರು

10 Aug 2017 3:28 PM |
9690 Report

ಇಂದು ಬೆಳಿಗ್ಗೆ ಪ್ರಧಾನಿ ಮೋದಿಯನ್ನು ಭೇಟಿಯಾದ ದೇವೇಗೌಡರು, ಹಾಸನದ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭೀಷೇಕ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

 ಮಹಾಮಸ್ತಕಾಭಿಷೇಕವು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಹಬ್ಬದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕವನ್ನು ಮಾಡಲಾಗುತ್ತದೆ. ಕೇಸರಿ, ತುಪ್ಪ, ಹಾಲು, ಮೊಸರು, ಚಿನ್ನದ ನಾಣ್ಯ ಮತ್ತು ಹಲವು ವಸ್ತುಗಳಿಂದ ಈ ಏಕಶಿಲಾ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ.

 ಜೈನ ಧರ್ಮೀಯರ ಪವಿತ್ರ ಶ್ರವಣಬೆಳಗೊಳ ಮಹಾಮಸ್ತಾಭಿಷೇಕ ಕಾರ್ಯಕ್ರಮಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮಾಜಿ  ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Edited By

jds admin

Reported By

jds admin

Comments