ಡೆಲ್ಲಿಯಲ್ಲಿ ಆ. 26ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ

23 Aug 2017 10:27 AM |
2379 Report

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ 26ರಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ನಡೆಯಲಿದ್ದು, ಪಕ್ಷದ ರಾಜ್ಯ ನಾಯಕರಿಗೆ ಮತ್ತೂಂದು ಸುತ್ತಿನ ಬಿಸಿ ಮುಟ್ಟಲಿದೆ. ಇತ್ತೀಚೆಗೆ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ನಾಯಕರಿಗೆ ವಹಿಸಿರುವ ಕಾರ್ಯಭಾರಗಳು ಮತ್ತು ಅದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಈ ಸಭೆ ಕರೆಯಲ

ಸೆಪ್ಟೆಂಬರ್‌ ಅಂತ್ಯಕ್ಕೆ ಮತ್ತೆ ಅಮಿತ್‌ ಶಾ ರಾಜ್ಯಕ್ಕೆ ಬರಲಿದ್ದು, ಅಷ್ಟರೊಳಗೆ ಪಕ್ಷವನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಸಂಪೂರ್ಣ ಸಿದಟಛಿಗೊಳಿಸುವ ಬಗ್ಗೆ ರೂಪಿಸಬೇಖಾದ ಕಾರ್ಯತಂತ್ರಗಳು, ಅಭ್ಯರ್ಥಿ ಗಳ ಆಯ್ಕೆ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಅಮಿತ್‌ ಶಾ ಬೆಂಗಳೂರಿಗೆ ಬಂದು ಸರಣಿ ಸಭೆಗಳನ್ನು ನಡೆಸಿದ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ನಾಯಕರಿಗೆ ಕೆಲವು ಕಾರ್ಯಭಾರಗಳನ್ನು ವಹಿಸಿದ್ದರು. ಬಳಿಕ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮತ್ತು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ ಮುಖಂಡರು, ಅಮಿತ್‌ ಶಾ ರವರ ನಿರ್ದೇಶನದಂತೆ ಪಕ್ಷ ಸಂಘಟನೆ ಕುರಿತು ಕೆಲವೊಂದು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲಾ ವರದಿಗಳನ್ನು ಅಮಿತ್‌ ಶಾ ಅವರಿಗೆ ನೀಡಬೇಕಾಗಿದ್ದು, ಅದಕ್ಕಾಗಿ ದೆಹಲಿಯಲ್ಲಿ ಅವರ ನೇತೃತ್ವದಲ್ಲೇ ಕೋರ್‌ ಕಮಿಟಿ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Edited By

Admin bjp

Reported By

Admin bjp

Comments