ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ
ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಪ್ರತಿ ತಿಂಗಳು 1000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 75,000 ರೂ. ಸ್ಕಾಲರ್ಶಿಪ್ ನೀಡಲು ನಿರ್ಧರಿಸಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಇದನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 20,000 ಕೋಟಿ ರೂಪಾಯಿ ಮೀಸಲಿರಿಸಿದೆ.
ದೇಶದಲ್ಲಿ ಸಂಶೋಧನಾ ಮೂಲ ಸೌಕರ್ಯ ನಿರ್ಮಾಣದ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ. ಅಷ್ಟೇ ಅಲ್ಲ ವಿಶ್ವವಿದ್ಯಾನಿಲಯಗಳ ಮೇಲೆ ಯುಜಿಸಿ ಮತ್ತು AICTE ನಿಯಂತ್ರಣವನ್ನೂ ಕಡಿಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಶ್ರೀ ಶ್ರೀ ಯೂನಿವರ್ಸಿಟಿಯಲ್ಲಿ ಮಾತನಾಡಿದ ಜಾವ್ಡೇಕರ್, ಹೊಸ ಯೋಜನೆಯ ಘೋಷಣೆ ಮಾಡಿದ್ರು. ಇದೇ ವೇಳೆ ಪದವಿ ಮತ್ತು ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣಪತ್ರ ವಿತರಿಸಲಾಯ್ತು.
Comments