ಬಿಬಿಎಂಪಿಯಲ್ಲಿ ಮೈತ್ರಿ ಮುರಿಯುವ ಸುಳಿವು ನೀಡಿದ ಎಚ್ಡಿಕೆ

24 Aug 2017 8:54 PM |
484 Report

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗಿರುವ ಮೈತ್ರಿ ಮುರಿಯುವ ಸಾಧ್ಯತೆಗಳಿವೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.

ಜೆಡಿಎಸ್ ಪಕ್ಷದವರು ಇರುವ ಸ್ಥಾಯಿ ಸಮಿತಿಗಳಿಗೆ ಯಾವುದೇ ಅಧಿಕಾರವಿಲ್ಲದಂತಾಗಿದೆ. ಸಚಿವ ಜಾರ್ಜ್‌ಗೆ ಮಾತ್ರ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದವರು ಹೈಪವರ್ ಕಮಿಟಿ ಮಾಡಿಕೊಂಡು ಹಣ ಲೂಟಿ ಮಾಡುತ್ತಿದ್ದಾರೆ.  ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಬಿಬಿಎಂಪಿಯಲ್ಲಿ ಸಾವಿರಾರು ಕೋಟಿ ಹಣ ಕೊಳ್ಳೆ ಹೊಡೆದಿದ್ದಾರೆ. ಇಂತವರಿಗೆ ನಾವು ಬೆಂಬಲ ಕೊಡಬೇಕಾ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನನ್ನನ್ನು ಜಗ್ಗಾಡಿಸಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿ ತಕ್ಕ ಪಾಠ ಕಲಿಸುತ್ತೇನೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. 

Edited By

hdk fans

Reported By

hdk fans

Comments