ಇನ್ನೂ 20 ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ: ವೀರಪ್ಪ ಮೊಯ್ಲಿ
ರಾಜ್ಯದ ಜನತೆ ಈಗಾಗಲೇ ಬಿಜೆಪಿಗೆ ಅಧಿಕಾರ ಕೊಟ್ಟು ನೋಡಿದ್ದಾರೆ. ಬಿಜೆಪಿ ದುರಾಡಳಿತದ ಹಿನ್ನೆಲೆಯಲ್ಲಿ ಇನ್ನೂ 20 ವರ್ಷ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಸಂಸದ ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.
ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿ ಜೈಲಿಗೆ ಹೋದರು. ಸಿಎಂ ಆಗಿದ್ದಾಗ ಜೈಲಿಗೆ ಹೋದವರ ಇತಿಹಾಸವನ್ನು ರಾಜ್ಯ ಕಂಡಿಲ್ಲ ಎಂದು ವಾಗ್ದಾಳಿ ನಡೆಸಿದರು
ಬಿಜೆಪಿ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಹಲವರು ಜೈಲಿಗೆ ಹೋದರು. ಮತ್ತೆ ಬಿಜೆಪಿಗೆ ಅಧಿಕಾರ ಕೊಡಲು ರಾಜ್ಯದ ಜನತೆ ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.
Comments