ಪ್ರಧಾನಿ ಮೋದಿಗೆ ದೇವೇಗೌಡರಿಂದ ಕಿವಿಮಾತು

ಕೇಂದ್ರದ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ವಿಷಾದ ವ್ಯಕ್ತ ಪಡಿಸಿದ್ದಾರೆ.
ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಗೌಡ್ರು, ಪ್ರಧಾನಿ ಮೋದಿಯವರ ಭರವಸೆಗಳು ಬರೀ ಹೇಳಿಕೆಗೆ ಸೀಮಿತವಾಗದೇ, ಕಾರ್ಯರೂಪಕ್ಕೂ ಬರಲಿ ಎಂದು ಹೇಳಿದ್ದಾರೆ. ಉಮಾಭಾರತಿ ಬಚಾವ್ ಆಗಿದ್ದು ಹೀಗೆ ಉತ್ತರಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಗೌಡ್ರು, ಮೋದಿ ಸರಕಾರದ ಈ ನಿರ್ಧಾರ ಒಂದು ವರ್ಗವನ್ನು ಓಲೈಸಲು ಎನ್ನುವುದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ.
ನಾನು ಮತ್ತು ಕುಮಾರಸ್ವಾಮಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ನಮಗೆ ಈ ಬಾರಿ ಮತದಾರ ಆಶೀರ್ವಾದ ಮಾಡಬಹುದು ಎನ್ನುವ ಆಶಾಭಾವನೆಯನ್ನು ಹೊಂದಿದ್ದೇವೆ ಎಂದು ದೇವೇಗೌಡರು ಹೇಳಿದ್ದಾರೆ. ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಕಿತ್ತಾಡುವುದರಲ್ಲೇ ಕಾಲಕಳೆಯುತ್ತಿದೆ. ಜನರ ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಬಿಜೆಪಿಗೆ ಮತ್ತು ಕಾಂಗ್ರೆಸ್ಸಿಗೆ ಪುರುಷೋತ್ತಿಲ್ಲ ಎಂದು ಗೌಡ್ರು ಬೇಸರ ವ್ಯಕ್ತಪಡಿಸಿದ್ದಾರೆ.
Comments