ಬಿಬಿಎಂಪಿ ಮೇಯರ್ ಚುನಾವಣೆ, ಬಿಜೆಪಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವರೇ ಜೆಡಿಎಸ್ ??
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಅವಧಿ ಸೆ.28ಕ್ಕೆ ಅಂತ್ಯಗೊಳ್ಳಲಿದೆ. ಬಿಬಿಎಂಪಿ ಹೊಸ ಮೇಯರ್ ಆಯ್ಕೆ ಚುನಾವಣೆಗೆ ಸಿದ್ಧವಾಗುತ್ತಿದ್ದು.
266 ಜನರು ಈ ಬಾರಿ ಬೆಂಗಳೂರಿನ ಪ್ರಥಮ ಪ್ರಜೆಯನ್ನು ಆಯ್ಕೆ ಮಾಡಲಿದ್ದಾರೆ. ಬಿಬಿಎಂಪಿ ಆಯುಕ್ತ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತೆ ಅವರಿಗೆ ಸಲ್ಲಿಸಿದ್ದಾರೆ. ಪ್ರಾದೇಶಿಕ ಆಯುಕ್ತರು ಕೆಲವು ದಿನಗಳಲ್ಲಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಜೆಡಿಎಸ್-ಕಾಂಗ್ರೆಸ್ ದೋಸ್ತಿಯಲ್ಲಿ ಕಹಿ , 266 ಜನರು ಮತದಾನ ಮಾಡುವುದರಿಂದ ಈ ಬಾರಿ ಮೇಯರ್ ಹುದ್ದೆಗೆ ಏರಲು ಮ್ಯಾಜಿಕ್ ನಂಬರ್ 134. ಪಾಲಿಕೆಯಲ್ಲಿ ಬಿಜೆಪಿ ಹೆಚ್ಚು ಸದಸ್ಯ ಬಲ ಹೊಂದಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು, ಮೇಯರ್ ಮತ್ತು ಉಪ ಮೇಯರ್ ಪಟ್ಟ ಹಂಚಿಕೊಂಡಿದ್ದು, ಅದರಿಂದ ಬಿಜೆಪಿಗೆ ಅಧಿಕಾರ ಸಿಗಲಿಲ್ಲ .
Comments