ಕುಮಾರಸ್ವಾಮಿಯವರ ಜನಪರ ಕೆಲಸಗಳೊಂದೇ ಸಾಕು 2018ರ ಚುನಾವಣೆ ಗೆಲ್ಲೋಕೆ

09 Sep 2017 11:30 AM |
1085 Report

ರಾಜ್ಯದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಅಧಿಕಾರದಲ್ಲಿದಾಗ ಮಾಡಿದ ಅಭಿವೃದ್ಧಿ ಪೂರಕ ಯೋಜನೆಗಳು ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ

ಇದುವರೆಗೂ ಆಡಳಿತ ನಡೆಸಿದ ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನು ಸಮಗ್ರ ಅಭಿವೃದ್ಧಿ ಮಾಡುವಲ್ಲಿ ವಿಪಲವಾಗಿವೆ. 20 ತಿಂಗಳ ಅಡಳಿತ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಹಲವು ಜನಪ್ರಿಯ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದರು.ಅವುಗಳು ಈಗಲೂ ಜನರ ಮನಸಿನಲ್ಲಿವೆ. ರಾಜ್ಯದ ಅಭಿವೃದ್ಧಿ ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಮಾತ್ರ ಸಾಧ್ಯ ಎಂದರು. ರಾಷ್ಟ್ರೀಯ ಪಕ್ಷಗಳ ಅಡಳಿತ ವೈಖರಿ ಕಂಡು ಜನ ಬೇಸತ್ತಿದ್ದಾರೆ.

ಇದೀಗ ಪ್ರಾದೇಶಿಕಪಕ್ಷದತ್ತ ಜನರ ಒಲವು ಮೂಡಿದೆ ಎಂಬುದು ಸ್ಪಷ್ಟವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷ ಅಧಿಕಾಕ್ಕೆ ಬರುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ರಾಜ್ಯವನ್ನು ಸರ್ವತೋಮುಖ ಅಭಿವೃದ್ದಿಯತ್ತ ಕೊಂಡೊಯ್ಯಲು ಮುಂಬರುವ ಚುನಾವಣೆಯಲ್ಲಿ ಪ್ರಾದೇಶಿಕವನ್ನು ಬೆಂಬಲಿಸುವಂತೆ ಮನವಿ ಮಾಡಿದ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್‌. 

 

Edited By

Suresh M

Reported By

hdk fans

Comments