ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ. ದೇವೇಗೌಡ್ರು ಕೈಗೊಂಡಿದ್ದ ಯೋಜನೆಗಳನ್ನು ತಿಳಿಸಲು ಜಾಥಾ ನೆಡಸಲಾಗುತ್ತದೆ

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮನೆಗೆ ಕುಮಾರಣ್ಣ ಜಾಥಾ ನಡೆಸಲಾಗಿತ್ತು. ಇದೀಗ ನಗರ ಜೆಡಿಎಸ್ ಘಟಕವು ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‍ಗಳಲ್ಲಿ ಮತ್ತೆ ಜಾಥಾ ನಡೆಸಲು ತೀರ್ಮಾನಿಸಿದೆ.
ಜಾಥಾದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಸಮಯದಲ್ಲಿ ಕೈಗೊಂಡಿದ್ದ ಯೋಜನೆಗಳ ಬಗ್ಗೆ ಹಾಗೂ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗ ಸಿಲಿಕಾನ್ ಸಿಟಿಗೆ ನೀಡಿರುವ ಕೊಡುಗೆಗಳ ಬಗ್ಗೆ ನಗರದ ಜನತೆಗೆ ಮನವರಿಕೆ ಮಾಡಿಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪ್ರಸಕ್ತ ಬೆಂಗಳೂರು ನಗರದಲ್ಲಿ ಕೇವಲ ಮೂರು ಮಂದಿ ಜೆಡಿಎಸ್ ಶಾಸಕರಿದ್ದು , ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇನ್ನೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಜೆಡಿಎಸ್ ನಿರ್ಧರಿಸಿದೆ. ಮಹಾಲಕ್ಷ್ಮಿ ಲೇಔಟ್‍ನಲ್ಲಿ ಜೆಡಿಎಸ್ ಪ್ರಬಲವಾಗಿದ್ದು, ಶಾಸಕ ಗೋಪಾಲಯ್ಯ ಅವರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಇನ್ನು ಪುಲಿಕೇಶಿನಗರ ಹಾಗೂ ಚಾಮರಾಜಪೇಟೆಯಲ್ಲಿ ಜೆಡಿಎಸ್ ವಿರುದ್ದ ಬಂಡಾಯ ಎದ್ದಿರುವ ಅಖಂಡ ಶ್ರೀನಿವಾಸಮೂರ್ತಿ, ಜಮೀರ್ ಅಹಮ್ಮದ್ ಅವರಿಗೆ ಪರ್ಯಾಯ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದಿತ್ತು. ಹಾಗಾಗಿ ಕೆಲವೇ ಅಂತರದಲ್ಲಿ ಸೋಲು ಅನುಭವಿಸಿದ ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಿ ಆಯಾ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಲು ತೀರ್ಮಾನಿಸಿದೆ.
Comments