ಗೃಹಮಂತ್ರಿ ರೆಡ್ಡಿಯನ್ನು ಸಿದ್ದು ದೇವೇಗೌಡರ ಮನೆಗೆ ಕಳುಹಿಸಿದ್ದು ಏಕೆ ? ಮೈತ್ರಿ ಕಳೆದುಕೊಳ್ಳುವ ಆತಂಕದಲ್ಲಿ ಕಾಂಗ್ರೆಸ್
ಗೃಹಸಚಿವ ರಾಮಲಿಂಗಾರೆಡ್ಡಿಯವರು ಜೆಡಿಎಸ್ ದೇವೇಗೌಡರ ಮನೆಗೆ ಸಿದ್ದರಾಮಯ್ಯನರ ನಿರ್ದೇಶನದಂತೆ ಭೇಟಿ ನೀಡಿರುವುದು ಕುತೂಹಲ ಕೆರೆಳಿಸಿದೆ.
ಬೆಂಗಳೂರಿನ ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ರಾಮಲಿಂಗಾ ರೆಡ್ಡಿ ಭೇಟಿ ನೀಡಿದ್ದು ಉಭಯ ನಾಯಕರು ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.ಸೆ.28ಕ್ಕೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಆದ್ದರಿಂದ, ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯ ಗೃಹಮಂತ್ರಿಯವರಿಗೆ ಸೂಚನೆ ನೀಡಿದ್ದರು.
ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಎರಡೂ ಪಕ್ಷಗಳು ಹಂಚಿಕೊಂಡಿವೆ. ಆದರೆ, ಈ ಬಾರಿ ಜೆಡಿಎಸ್ ಮೇಯರ್ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದು, ಚುನಾವಣೆ ಕುತೂಹಲ ಮೂಡಿಸಿದೆ. ಶಾಸಕರು, ಬಿಬಿಎಂಪಿ ಸದಸ್ಯರ ಜೊತೆ ಭಾನುವಾರ ಸಭೆ ನಡೆಸಿದ್ದರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಆದರೆ ಕುಮಾರ ಸ್ವಾಮಿಯವರನ್ನು ಭೇಟಿ ಮಾಡದೆ ನೇರವಾಗಿ ಜೆಡಿಎಸ್ ವರಿಷ್ಠ ದೇವೇಗೌಡರನ್ನ ಭೇಟಿ ಮಾಡಲು ಹೇಳಿರೋದು ಕುತೂಹಲಕ್ಕೆ ಕಾರಣವಾಗಿದೆ .
Comments